ADVERTISEMENT

ಬಿಜೆಪಿ ಶಾಸಕ ವಿಜಯಕುಮಾರ್‌ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 4 ಮೇ 2018, 20:37 IST
Last Updated 4 ಮೇ 2018, 20:37 IST
ವಿಜಯ್‌ಕುಮಾರ್‌
ವಿಜಯ್‌ಕುಮಾರ್‌   

ಬೆಂಗಳೂರು: ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಹಾಲಿ ಅಭ್ಯರ್ಥಿ ಬಿ.ಎನ್‌. ವಿಜಯ ಕುಮಾರ್‌ (60) ಶುಕ್ರವಾರ (ಮೇ 3) ರಾತ್ರಿ 1 ಗಂಟೆಗೆ ನಿಧನರಾದರು. ಹೀಗಾಗಿ, ಇದೇ 12 ರಂದು ನಡೆಯಬೇಕಾಗಿದ್ದ ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ.

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ವಿಜಯ ಕುಮಾರ್‌, ಗುರುವಾರ ಚುನಾವಣಾ ಪ್ರಚಾರ ಮಾಡುತ್ತಿದ್ದಾಗಲೇ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಯಿತು.

2008 ಮತ್ತು 2013 ರ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಅವರು ಆಯ್ಕೆಯಾಗಿದ್ದರು. ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆ
ಯಲ್ಲಿದ್ದ ಅವರು ಅನಾರೋಗ್ಯದ ನಡುವೆಯೂ ಪ್ರಚಾರಕ್ಕೆ ಇಳಿದಿದ್ದರು. ಇತ್ತೀಚೆಗೆ ಅವರ ಹೃದಯದ ನಾಳಕ್ಕೆ ಸ್ಟೆಂಟ್‌ ಅಳವಡಿಸಲಾಗಿತ್ತು. ಹೆಚ್ಚು ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.