ADVERTISEMENT

ಬಿಸಿಯೂಟ ಸಂಭಾವನೆ ರೂ 500 ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2013, 19:30 IST
Last Updated 5 ಡಿಸೆಂಬರ್ 2013, 19:30 IST

ಸುವರ್ಣ ಸೌಧ (ಬೆಳಗಾವಿ): ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಗೆ ಹೆಚ್ಚುವರಿ ₨ ೫೦೦ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಅಡುಗೆ ಸಿಬ್ಬಂದಿಯ ಮನವಿ ಹಿನ್ನೆಲೆಯಲ್ಲಿ ನವೆಂಬರ್ 7 ರಂದು ವಿವಿಧ ಸಂಘಟನೆಗಳ ಜೊತೆ ಚರ್ಚೆ ನಡೆಸಲಾಗಿತ್ತು.

ಅಲ್ಲಿ ನಡೆದ ಮಾತುಕತೆ ಹಿನ್ನೆಲೆಯಲ್ಲಿ ಈಗ ನೀಡುತ್ತಿರುವ ಸಂಭಾವನೆಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು ₨ ೫೦೦ ನೀಡಲು ಗುರುವಾರ ನಿರ್ಧರಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.