ADVERTISEMENT

ಬೂತ್‌ ಮಟ್ಟದ ಎಣಿಕೆ ಪ್ರಶ್ನಿಸಿ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 22 ಮೇ 2018, 19:30 IST
Last Updated 22 ಮೇ 2018, 19:30 IST

ಬೆಂಗಳೂರು: 'ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳ ಮತ ಎಣಿಕೆ ಸಂದರ್ಭದಲ್ಲಿ ಆಯಾ ಕ್ಷೇತ್ರಗಳ ಅಭ್ಯರ್ಥಿಗಳ ಫಲಿತಾಂಶವನ್ನು ಬೂತ್ ಮಟ್ಟದಲ್ಲಿ ಎಣಿಕೆ ಮಾಡಿ ಪಟ್ಟಿ ಮಾಡುವುದನ್ನು ಕೈಬಿಡಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮತ್ತು ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

‘ಹೀಗಾಗಿ ಚುನಾವಣೆ ನಡೆಸುವ ನಿಯಮಗಳು-1961ಕ್ಕೆ ತಿದ್ದುಪಡಿ ತರಬೇಕು. ಈ ದಿಸೆಯಲ್ಲಿ ರಾಷ್ಟ್ರೀಯ ಕಾನೂನು ಆಯೋಗವು 2015 ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಪರಿಗಣಿಸಿ ಅದನ್ನು ಜಾರಿಗೊಳಿಸಲು ನಿರ್ದೇಶಿಸಬೇಕು ಮತ್ತು ಪ್ರತಿ ಕ್ಷೇತ್ರದ ಮತಗಳನ್ನು ಒಮ್ಮೆಲೇ ಮಿಶ್ರಣ ಮಾಡಿ ಫಲಿತಾಂಶ ಪ್ರಕಟಿಸುವ ಕ್ರಮ ಜಾರಿಗೆ ಬರುವಂತಾಗಬೇಕು’ ಎಂದು ಅರ್ಜಿದಾರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT