ADVERTISEMENT

ಬೆಂಗಳೂರು ಪೊಲೀಸ್ ಕಮೀಷನರ್ ಮಿರ್ಜಿ ವರ್ಗ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2013, 10:34 IST
Last Updated 5 ಏಪ್ರಿಲ್ 2013, 10:34 IST
ಬೆಂಗಳೂರು ಪೊಲೀಸ್ ಕಮೀಷನರ್ ಮಿರ್ಜಿ ವರ್ಗ
ಬೆಂಗಳೂರು ಪೊಲೀಸ್ ಕಮೀಷನರ್ ಮಿರ್ಜಿ ವರ್ಗ   

ಬೆಂಗಳೂರು (ಪಿಟಿಐ): ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ಜಿ. ಜ್ಯೋತಿಪ್ರಕಾಶ್ ಮಿರ್ಜಿ ಅವರನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಶುಕ್ರವಾರ ವರ್ಗಾವಣೆ ಮಾಡಲಾಗಿದೆ.

ಗೃಹ ಕಾರ್ಯದರ್ಶಿ ರಾಘವೇಂದ್ರ ಔರಾದಕರ ಅವರನ್ನು ತತ್ ಕ್ಷಣದಿಂದ ಜಾರಿಗೆ ಬರುವಂತೆ ಮಿರ್ಜಿ ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

ಮುಕ್ತ, ಪ್ರಾಮಾಣಿಕ ಚುನಾವಣೆ ನಡೆಸುವ ಸಲುವಾಗಿ ಭಾರತದ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಈ ಆದೇಶ ಹೊರಡಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.