ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಮನಗರ, ತುಮಕೂರು, ಮಂಗಳೂರು, ದಾವಣಗೆರೆ, ಬೀದರ್ ಮತ್ತು ಕಲಬುರ್ಗಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಚಂಡಮಾರುತದ ಪ್ರಭಾವ ಬೀರುತ್ತಿರುತ್ತಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಇಲಾಖೆ ಹೇಳಿದೆ.
ಚಂಡಮಾರುತ ಪ್ರಸ್ತುತ ಚಟುವಟಿಕೆಯಿಂದಿದ್ದು, ಪ್ರಭಾವ ಬೀರುತ್ತಿರುವುದರಿಂದ ಜನರು ಅನಗತ್ಯವಾಗಿ ಹೊರಗೆ ಹೋಗದೆ ಮನೆಯಲ್ಲಿ ಇರುವಂತೆ ಮುನ್ನೆಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಶನಿವಾರ ಗುಡುಗು ಸಹಿತ ಮಳೆ ಆರಂಭವಾಗಿದ್ದು, ಭಾರಿ ಮಿಂಚು, ಸಿಡಿಲು ಇದ್ದು, ಅನಗತ್ಯವಾಗಿ ಜನರು ಹೊರ ಹೋಗದೆ ಮನೆಯಲ್ಲಿ ಉಳಿಯುವಂತೆ ಸೂಚಿಸಿ ಇಲಾಖೆ ಟ್ವೀಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.