ADVERTISEMENT

ಬೆಂಗಳೂರು ಮೈಸೂರು ಹೆದ್ದಾರಿ ಸಂಚಾರ ಮುಕ್ತ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2012, 19:30 IST
Last Updated 9 ಅಕ್ಟೋಬರ್ 2012, 19:30 IST

ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ (ಕೆಆರ್‌ಎಸ್) ಕಾವೇರಿ ನದಿಗೆ ನೀರು ಬಿಡುವುದನ್ನು ನಿಲ್ಲಿಸಿದ ಕಾರಣ ಮಂಗಳವಾರ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿತ್ತು.

ಕಳೆದ 9 ದಿನಗಳಿಂದ ಜಿಲ್ಲೆಯ ವಿವಿಧೆಡೆ ಹೆದ್ದಾರಿ, ರಸ್ತೆ ತಡೆ ನಡೆಸಿದ್ದರಿಂದ, ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ಪರದಾಡುವಂತಾಗಿತ್ತು.

ಸತ್ಯಾಗ್ರಹ ಮುಂದುವರಿಕೆ: ಕಾವೇರಿ ನದಿ ಪ್ರಾಧಿಕಾರದ ಸಭೆ ಹಾಗೂ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಡೆಸುತ್ತಿರುವ ಸರದಿ ಉಪವಾಸ ಸತ್ಯಾಗ್ರಹ ಮುಂದುವರೆಸಲಾಗುವುದು ಎಂದು ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.