
ಪ್ರಜಾವಾಣಿ ವಾರ್ತೆಬೆಳಗಾವಿ: ಡಾ. ಬೆಟಗೇರಿ ಕೃಷ್ಣಶರ್ಮ ಕಾವ್ಯ ಪ್ರಶಸ್ತಿಗೆ (2012) ಡಾ. ಎನ್.ಎಸ್.ಲಕ್ಷ್ಮಿನಾರಾಯಣ ಭಟ್ಟ ಮತ್ತು ಕಥಾ ಪ್ರಶಸ್ತಿಗೆ (2013) ಡಾ. ರಾಜಶೇಖರ ನೀರಮಾನ್ವಿ ಅವರು ಆಯ್ಕೆಯಾಗಿದ್ದಾರೆ.
ಎರಡೂ ಪ್ರಶಸ್ತಿಗಳು ತಲಾ ರೂ 1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿವೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ 31 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್‌ನ ಅಧ್ಯಕ್ಷ ಪ್ರೊ. ರಾಘವೇಂದ್ರ ಪಾಟೀಲ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.