ADVERTISEMENT

ಬೆಳಗಾವಿಯಲ್ಲಿ ಕನಿಷ್ಠ ಉಷ್ಣಾಂಶ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2011, 16:25 IST
Last Updated 20 ಫೆಬ್ರುವರಿ 2011, 16:25 IST

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ.

ಬೆಳಗಾವಿಯಲ್ಲಿ 11.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದ್ದು, ಉಳಿದಂತೆ ರಾಜ್ಯದೆಲ್ಲೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.