ADVERTISEMENT

ಬೆಳಗಾವಿ ಅಧಿವೇಶನ 13ರಿಂದ ಆರಂಭ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2017, 19:30 IST
Last Updated 11 ಅಕ್ಟೋಬರ್ 2017, 19:30 IST

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನವೆಂಬರ್‌ 13ರಿಂದ 10 ದಿನ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ.

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

‘ಇದೇ 25 ಮತ್ತು 26ರಂದು ವಿಧಾನಸೌಧದ ವಜ್ರ ಮಹೋತ್ಸವ ನಡೆಯಲಿದ್ದು, ಮುಂದಿನ ತಿಂಗಳು 7ರಿಂದ 10 ದಿನ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುವುದು’ ಎಂದು ವಿಧಾನಸಭಾ ಅಧ್ಯಕ್ಷ ಕೆ.ಬಿ. ಕೋಳಿವಾಡ ಮಂಳವಾರ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದರು.

ADVERTISEMENT

‘ನ. 7ರಿಂದ ಅಧಿವೇಶನ ನಡೆಸುವ ಸಂಬಂಧ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಯಾವಾಗ ಅಧಿವೇಶನ ನಡೆಸಬೇಕು ಎಂಬುದನ್ನು ನಿರ್ಧರಿಸುವುದು ಸಚಿವ ಸಂಪುಟ ಮತ್ತು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟ ವಿಷಯ’ ಎಂದು ವಿಧಾನಸಭಾ ಸಚಿವಾಲಯದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.