ADVERTISEMENT

ಬೆಳಗಾವಿ: ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2018, 6:58 IST
Last Updated 4 ಜೂನ್ 2018, 6:58 IST
ಉದ್ಯಮಿ ಶೈಲೇಶ್ ಜೋಶಿ
ಉದ್ಯಮಿ ಶೈಲೇಶ್ ಜೋಶಿ   

ಬೆಳಗಾವಿ: ಇಲ್ಲಿನ ಗಣೇಶಪುರದ ನಿವಾಸಿ, ಉದ್ಯಮಿ ಶೈಲೇಶ್ ಜೋಶಿ (40) ಗುಂಡು ಹಾರಿಸಿಕೊಂಡು ಸೋಮವಾರ ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶೈಲೇಶ್ ಜೋಶಿ ಅಮೃತ್ ಫಾರ್ಮಾಸಿಟಿಕಲ್ಸ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಲಿವರ್ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಪರವಾನಗಿ ಹೊಂದಿರುವ ಪಿಸ್ತೂಲ್‌ನಿಂದ ಹೊಟ್ಟೆಯ ಭಾಗಕ್ಕೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ADVERTISEMENT

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕ್ಯಾಂಪ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.