
ಪ್ರಜಾವಾಣಿ ವಾರ್ತೆಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದೆ. ಒಣಹವೆ ಮುಂದುವರೆದಿದೆ.
ಬಂಗಾಳಕೊಲ್ಲಿ ಪೂರ್ವ ಭಾಗದಲ್ಲಿವಾಯು ಭಾರ ಕುಸಿತದ ಕಾರಣ ಕನಿಷ್ಠ ತಾಪಮಾನ ಕಂಡು ಬಂದಿದ್ದ ಪರಿಣಾಮ ರಾಜ್ಯದ ಕೆಲವು ಭಾಗಗಳಲ್ಲಿ ಉಷ್ಣಾಂಶದಲ್ಲಿ ಬದಲಾವಣೆ ಯಾಗಿದೆ. ರಾಯಚೂರಿನಲ್ಲಿ 8.5 ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 7.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಶೀತ ಮಾರುತ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.