ADVERTISEMENT

ಬೆಳೆದು ನಿಂತ ಮಕ್ಕಳು ತಮ್ಮ ಕಣ್ಣೆದುರೇ ಅಗಲಿಹೋಗುವ ಸ್ಥಿತಿ ಯಾವ ತಂದೆತಾಯಿಗೂ ಬಾರದಿರಲಿ: ಸಿದ್ಧರಾಮಯ್ಯ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2016, 11:07 IST
Last Updated 3 ಆಗಸ್ಟ್ 2016, 11:07 IST
ಬೆಳೆದು ನಿಂತ ಮಕ್ಕಳು ತಮ್ಮ ಕಣ್ಣೆದುರೇ ಅಗಲಿಹೋಗುವ ಸ್ಥಿತಿ ಯಾವ ತಂದೆತಾಯಿಗೂ ಬಾರದಿರಲಿ: ಸಿದ್ಧರಾಮಯ್ಯ
ಬೆಳೆದು ನಿಂತ ಮಕ್ಕಳು ತಮ್ಮ ಕಣ್ಣೆದುರೇ ಅಗಲಿಹೋಗುವ ಸ್ಥಿತಿ ಯಾವ ತಂದೆತಾಯಿಗೂ ಬಾರದಿರಲಿ: ಸಿದ್ಧರಾಮಯ್ಯ   

ಬೆಂಗಳೂರು: ಪುತ್ರ ರಾಕೇಶ್‍ನ್ನು ಕಳೆದುಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 'ಬೆಳೆದು ನಿಂತ ಮಕ್ಕಳು ತಮ್ಮ ಕಣ್ಣೆದುರೇ ಅಗಲಿಹೋಗುವ ಸ್ಥಿತಿ ಯಾವ ತಂದೆತಾಯಿಗೂ ಬಾರದಿರಲಿ ಎನ್ನುವುದಷ್ಟೇ ನನ್ನ ಪ್ರಾರ್ಥನೆ' ಎಂದು ತಮ್ಮ ದುಃಖವನ್ನು ತೋಡಿಕೊಂಡಿದ್ದಾರೆ.

''ರಾಕೇಶ‍‍ ನನ್ನು ದೂರದ ಬೆಲ್ಜಿಯಂ ದೇಶದ ಬ್ರಸೆಲ್ಸ್ ನ ಯೂನಿವರ್ಟಿಸಿ ಹಾಸ್ಪಿಟಲ್ ನಲ್ಲಿ ತೀವ್ರನಿಘಾ ಘಟಕದಲ್ಲಿ ನಾವು ಆರೈಕೆ ಮಾಡುತ್ತಿದ್ದಾಗ ರಾಜ್ಯದ ಜನತೆ ಜಾತಿ,ಧರ್ಮ,ಪಕ್ಷ, ಪಂಥ ಎಂಬ ಭೇದ ಮಾಡದೆ ಒಳ್ಳೆಯದಾಗಲಿ ಎಂದು ಮನದುಂಬಿ ಹಾರೈಸಿದ್ದಾರೆ. ನಮ್ಮ ಕುಟುಂಬ ಕಡುದು:ಖದಲ್ಲಿರುವಾಗ ನಾಡಿನ ಜನತೆ ತೋರಿದ ಪ್ರೀತಿ, ಕಾಳಜಿ ಮತ್ತು ನೀಡಿದ ಮಾನಸಿಕ ಸ್ಥೈರ್ಯ ನನ್ನನ್ನು ಮೂಕನನ್ನಾಗಿ ಮಾಡಿದೆ . ಹಲವಾರು ಹಿತೈಷಿಗಳು ಮಂದಿರ,ಮಸೀದಿ, ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿರುವುದು ನನ್ನ ಗಮನಕ್ಕೆ ಬಂದಿದೆ. ಇಡೀ ಕರ್ನಾಟಕದ ಜನತೆಯನ್ನು ನನ್ನ ಕುಟುಂಬವೆಂದು ಬಗೆದಿರುವ ನನ್ನನ್ನು ಮತ್ತು ನನ್ನ ಕುಟುಂಬವನ್ನು ತಮ್ಮ ಕುಟುಂಬದ ಭಾಗವೆಂಬಂತೆ ಕಾಳಜಿ ತೋರಿದ ರಾಜ್ಯದ ಸಹೃದಯಿಗಳ ಈ ಪ್ರೀತಿಯನ್ನು ನಾನೆಂದೂ ಮರೆಯಲಾರೆ.

ಕರ್ನಾಟಕದ ಮುಖ್ಯಮಂತ್ರಿಯೊಬ್ಬರು ಹೀಗೆ ಆಸ್ಪತ್ರೆಯಲ್ಲಿ ತಮ್ಮ ಮಗನ ಆರೈಕೆಯಲ್ಲಿದ್ದಾರೆ ಎಂಬ ಸುದ್ದಿ ತಿಳಿದೊಡನೆಯೇ ವಿಜಯೇಂದ್ರ ಎಂಬ ಬೆಂಗಳೂರು ಮೂಲದ ಬೆಲ್ಜಿಯಂ ನಿವಾಸಿ ಯುವಕ ಮತ್ತು ಅವರ ಪತ್ನಿ ತಾವಾಗಿ ಬಂದು ನಮಗೆ ನೀಡಿದ ನೆರವನ್ನು ನಾನು ಮರೆಯಲಾರೆ. ಅವರು ತಮ್ಮ ಮನೆಯಿಂದ ಅಡುಗೆಯನ್ನು ಸಹ ಮಾಡಿಕೊಂಡು ಬಂದು ನಮಗೆ ನೀಡುತ್ತಿದ್ದುದು ನನಗೆ ಹೃದಯ ತುಂಬಿ ಬಂದ ಕ್ಷಣವಾಗಿತ್ತು. ವಿಜೇಂದ್ರ ಅವರ ಈ ಅಭಿಮಾನ - ಪ್ರೀತಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆಯೇ'' ಎಂದು ಸಿಎಂ ಸಿದ್ಧರಾಮಯ್ಯ ತಮ್ಮ ಫೇಸ್‍ಬುಕ್‍ನಲ್ಲಿ ಪೇಜ್‍ನಲ್ಲಿ ಬರೆದುಕೊಂಡಿದ್ದಾರೆ.

</p></p>

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT