
ಪ್ರಜಾವಾಣಿ ವಾರ್ತೆಇಂಡಿ (ವಿಜಾಪುರ ಜಿಲ್ಲೆ): ತಾಲ್ಲೂಕಿನ ಹೊರ್ತಿ ಗ್ರಾಮದಲ್ಲಿ ಇತ್ತೀಚೆಗೆ ಬಿದ್ದ ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾಗಿ ಮನನೊಂದ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಹೊಸೂರಿನಲ್ಲಿ ನಡೆದಿದೆ.
ಗಜಾನಂದ ಶ್ರೀಶೈಲ ರೂಗಿ (35) ಆತ್ಮಹತ್ಯೆ ಮಾಡಿಕೊಂಡ ರೈತ. ಹೊರ್ತಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆಲಿಕಲ್ಲು ಮಳೆಯಿಂದ ಇವರ 10 ಕುರಿ ಸತ್ತಿವೆ. ಗೋಧಿ, ಜೋಳದ ಬೆಳೆ ನಾಶವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.