ADVERTISEMENT

ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2018, 19:30 IST
Last Updated 26 ಫೆಬ್ರುವರಿ 2018, 19:30 IST
ಹೂವಿನಹಡಗಲಿ ತಾಲ್ಲೂಕು ಹ್ಯಾರಡ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಚಿರತೆ
ಹೂವಿನಹಡಗಲಿ ತಾಲ್ಲೂಕು ಹ್ಯಾರಡ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಚಿರತೆ   

ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ): ತಾಲ್ಲೂಕಿನ ಹ್ಯಾರಡ ಗ್ರಾಮದಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಚಿರತೆ, ಸೋಮವಾರ ಬೋನಿಗೆ ಬಿದ್ದಿದೆ.

ಹ್ಯಾರಡ ಸುತ್ತಮುತ್ತಲ ಗ್ರಾಮಗಳಲ್ಲಿ ಮೇಲಿಂದ ಮೇಲೆ ಕುರಿ, ಜಾನುವಾರು ಮತ್ತು ನಾಯಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿತ್ತು. ಗ್ರಾಮಸ್ಥರ ಮನವಿ ಮೇರೆಗೆ ಈಚೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಲಿಯಮ್ಮ ಕೆರೆಯ ಬಳಿ ಆಯಕಟ್ಟಿನ ಸ್ಥಳದಲ್ಲಿ ಬೋನು ಇರಿಸಿದ್ದರು. ಆಹಾರ ಅರಸಿ ಬೋನಿನ ಬಳಿ ಬಂದಿದ್ದ ಚಿರತೆ ಸೋಮವಾರ ಸೆರೆಯಾಗಿದೆ.

‘ಅಂದಾಜು 15 ವರ್ಷದ ಚಿರತೆ ಬೋನಿಗೆ ಬಿದ್ದಿದ್ದು, ಬಳ್ಳಾರಿಯ ಪ್ರಾಣಿ ಸಂಗ್ರಹಾಲಯಕ್ಕೆ ರವಾನಿಸಲಾಗಿದೆ. ಈ ಭಾಗದ ಅರಣ್ಯದಂಚಿನಲ್ಲಿ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರೆಯಲಿದೆ’ ಎಂದು ಅರಣ್ಯಾಧಿಕಾರಿ ರವೀಂದ್ರ ನಾಯ್ಕ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.