ADVERTISEMENT

ಬೋನಿಗೆ ಬಿದ್ದ ಹೆಣ್ಣು ಚಿರತೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2017, 3:47 IST
Last Updated 7 ಡಿಸೆಂಬರ್ 2017, 3:47 IST
ಬೋನಿಗೆ ಬಿದ್ದ ಹೆಣ್ಣು ಚಿರತೆ
ಬೋನಿಗೆ ಬಿದ್ದ ಹೆಣ್ಣು ಚಿರತೆ   

ಎಚ್.ಡಿ.ಕೋಟೆ: ತಾಲ್ಲೂಕಿನ ರಾಮೇನಹಳ್ಳಿಯಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಮಂಗಳವಾರ ರಾತ್ರಿ ಸುಮಾರು 6 ವರ್ಷದ ಹೆಣ್ಣು ಚಿರತೆ ಬಿದ್ದಿದೆ.

20 ದಿನಗಳ ಹಿಂದೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದರಿಂದ ಆತಂಕಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬಳಿಕ ಬೋನು ಇಡಲಾಗಿತ್ತು.

‘ಜಮೀನು ಮಾಲೀಕ ನಾಗನಾಯಕ ಪ್ರತಿ ದಿನ ಬೋನಿಗೆ ನಾಯಿ ಕಟ್ಟುತ್ತಿದ್ದರು. ನಾಯಿ ತಿನ್ನಲು ಬಂದ ಚಿರತೆ ಬೋನಿಗೆ ಬಿದ್ದಿದೆ. ಚಿರತೆಯನ್ನು ಬುಧವಾರ ನಾಗರಹೊಳೆ ಉದ್ಯಾನಕ್ಕೆ ಬಿಡಲಾಯಿತು’ ಎಂದು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಮಧು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.