ಬೆಂಗಳೂರು: ಸ್ಥಗಿತಗೊಳಿಸಿರುವ ಬ್ಯಾಂಕ್ ಖಾತೆಗಳನ್ನು ಮುಕ್ತಗೊಳಿಸುವ ಸಂಬಂಧ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಅಧಿಕಾರಿಗಳ ಹಾಗೂ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಗಳ ನಡುವೆ ಸೋಮವಾರ ನಡೆದ ಮಾತುಕತೆಯಲ್ಲಿ ಸ್ಪಷ್ಟ ತೀರ್ಮಾನ ಹೊರಬಿದ್ದಿಲ್ಲ.
ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ 2009-10ನೇ ಸಾಲಿನಲ್ಲಿ ಆದಾಯ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ತೆರಿಗೆ ಇಲಾಖೆ ಇವೆರಡು ಸಂಸ್ಥೆಗಳ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿದೆ. ಈ ಖಾತೆಗಳ ಮೂಲಕ ವ್ಯವಹಾರ ನಡೆಸಲು ಸಾರಿಗೆ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಬೇಕು ಎಂಬ ಮನವಿಯೊಂದಿಗೆ ಮಾತುಕತೆ ನಡೆದಿತ್ತು. ಆದರೆ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.