ADVERTISEMENT

ಬ್ಲೂಫಿಲಂ ವೀಕ್ಷಣೆ: ಸಿ.ಎಂ- ಸ್ಪೀಕರ್ ಚರ್ಚೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2012, 19:30 IST
Last Updated 17 ಫೆಬ್ರುವರಿ 2012, 19:30 IST

ಬೆಂಗಳೂರು: ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶುಕ್ರವಾರ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರನ್ನು ವಿಧಾನಸೌಧದ ಅವರ ಕಚೇರಿಯಲ್ಲಿ ಭೇಟಿ ಮಾಡಿ 20 ನಿಮಿಷಗಳ ಕಾಲ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.

ಬ್ಲೂಫಿಲಂ ವಿವಾದ ಕುರಿತು ತನಿಖೆಗೆ ವಿಚಾರಣಾ ಸಮಿತಿ ರಚಿಸಿದ್ದು, ಅದನ್ನು ಪ್ರತಿಪಕ್ಷಗಳು ಬಹಿಷ್ಕರಿಸುವ ಬೆದರಿಕೆ ಹಾಕಿವೆ. ಈ ಹಿನ್ನೆಲೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಇಬ್ಬರೂ ಚರ್ಚೆ ನಡೆಸಿದರು ಎನ್ನಲಾಗಿದೆ.

`ಸಂಪುಟ ವಿಸ್ತರಣೆ ವೇಳೆ ಕೊಡಗು ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು.  ಅಪ್ಪಚ್ಚು ರಂಜನ್‌ರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು~ ಎಂದು ಸ್ಪೀಕರ್‌ಮುಖ್ಯಮಂತ್ರಿಗೆ ಬೇಡಿಕೆ ಇಟ್ಟರು ಎನ್ನಲಾಗಿದೆ.
ಯನ್ನೂ ಮುಖ್ಯಮಂತ್ರಿ ಮುಂದೆ ಸ್ಪೀಕರ್ ಬೋಪಯ್ಯ ಇಟ್ಟರು ಎನ್ನಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.