ADVERTISEMENT

ಭಿನ್ನಮತ ಕುರಿತು ಹೈಕಮಾಂಡ್‌ ಜತೆ ಚರ್ಚಿಸಿದ್ದೇನೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 10 ಜೂನ್ 2018, 10:58 IST
Last Updated 10 ಜೂನ್ 2018, 10:58 IST

ಬಾಗಲಕೋಟೆ: ಪಕ್ಷದಲ್ಲಿ ಕಾಣಿಸಿಕೊಂಡಿರುವ ಭಿನ್ನಮತ ಕುರಿತು ಹೈಕಮಾಂಡ್ ಜತೆ ಚರ್ಚಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲೆಯ ನೀಲಗುಂದದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಿನ್ನಮತ ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ದಿನಕ್ಕೆ ಮೂರು ಬಾರಿ ಫೋನ್‌ ಮೂಲಕ ಮಾತನಾಡಿದ್ದೇನೆ. ಎಲ್ಲರೂ ಸಮಾಧಾನ ಆಗಿದ್ದು, ಯಾವುದೇ ಅತೃಪ್ತಿ ಇಲ್ಲ’ ಎಂದು ಹೇಳಿದರು.

ಈಗಿನ ಮಂತ್ರಿಗಳಿಗೆ ಎರಡು ವರ್ಷ ಅವಧಿಗೆ ಅವಕಾಶ ನೀಡಿದ್ದೇವೆ. ಮುಂದಿನ ಅವಧಿಗೆ ಉಳಿದವರಿಗೆ ಮಂತ್ರಿ ಸ್ಥಾನ ನೀಡಿ ಸಮಾಧಾನಪಡಿಸುತ್ತೇವೆ ಎಂದರು. 

ADVERTISEMENT

ದೆಹಲಿ ಹೈಕಮಾಂಡ್‌ನಿಂದ ನನಗೆ ಯಾವುದೇ ಬುಲಾವ್ ಬಂದಿಲ್ಲ. ಹಾಗಾಗಿ ನಾನು ದೆಹಲಿಗೆ ಹೋಗಿಲ್ಲ. ದೂರವಾಣಿ ಮೂಲಕವೇ ಹೈಕಮಾಂಡ್ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

ಎಂ.ಬಿ.ಪಾಟೀಲ್‌ಗೆ ಡಿಸಿಎಂ ಸ್ಥಾನ: ಸದ್ಯ ಯಾವುದೇ ಡಿಸಿಎಂ ಸ್ಥಾನ ಇನ್ನು ಸೃಷ್ಠಿಯಾಗಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅಂತಿಮ ನಿಧಾ೯ರ ತೆಗೆದುಕೊಳ್ಳಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.