ADVERTISEMENT

ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿಗಳ ಸಾವು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2017, 3:50 IST
Last Updated 6 ಅಕ್ಟೋಬರ್ 2017, 3:50 IST
ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿಗಳ ಸಾವು
ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿಗಳ ಸಾವು   

ರಾಮನಗರ: ತಾಲ್ಲೂಕಿನ ಕೆಂಪನಹಳ್ಳಿ ಗೇಟ್ ಬಳಿ ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಜೊಹಿಲ್ ಜಾಕೊಬ್, ನಿಖಿತ್ ಸುದೀಪ್, ಜೀನಾ ಯಲ್ಡೊ ಮತ್ತು ದಿವ್ಯಾ ಮೃತರು. ಎಲ್ಲರೂ 20–21 ವಯಸ್ಸಿನವರಾಗಿದ್ದು, ಕೇರಳ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಪೈಕಿ ಇಬ್ಬರು ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇನ್ನಿಬ್ಬರು ತಮಿಳುನಾಡಿನ ವೆಲ್ಲೂರಿನ ವಿಐಟಿ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಬೆಳಿಗ್ಗೆ 3.30ರ ಸುಮಾರಿಗೆ ಇವರೆಲ್ಲರೂ ಕಾರಿನಲ್ಲಿ ಬೆಂಗಳೂರಿನ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಟ್ರಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.