ADVERTISEMENT

ಭೀಮಾ ತೀರ: 200 ಲಾರಿ ಲೋಡ್‌ ಮರಳು ವಶ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2018, 19:30 IST
Last Updated 7 ಏಪ್ರಿಲ್ 2018, 19:30 IST

ವಿಜಯಪುರ: ಭೀಮಾ ನದಿ ತೀರದಲ್ಲಿ ಎರಡು ಕಡೆ ಅಕ್ರಮವಾಗಿ ಸಂಗ್ರಹಿಸಿದ್ದ 200 ಲಾರಿ ಲೋಡ್‌ ಮರಳನ್ನು, ಶನಿವಾರ ನಸುಕಿನಲ್ಲಿ ದಾಳಿ ನಡೆಸಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಡಚಣ ತಾಲ್ಲೂಕಿನ ಕೆರೂರು ಬಳಿ ನದಿ ತೀರ ಹಾಗೂ ಉಮರಜ ಬಳಿ ತಲಾ 100 ಲಾರಿ ಲೋಡ್‌ ಮರಳನ್ನು ಸಂಗ್ರಹಿಸಲಾಗಿತ್ತು. ಮರಳು ಸಂಗ್ರಹಕ್ಕಾಗಿ ಬಳಸುತ್ತಿದ್ದ ನಾಲ್ಕು ಲಾರಿ, ಒಂದು ಟಿಪ್ಪರ್‌ ಹಾಗೂ ಐದು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಕ್ಕಂ ಪ್ರಕಾಶ್ ಅಮೃತ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ದೋಣಿಗಳು ಹಾಗೂ ಒಂದು ಲಾರಿ ಮಹಾರಾಷ್ಟ್ರಕ್ಕೆ ಸೇರಿದ್ದು, ಮರಳನ್ನು ಅಕ್ರಮವಾಗಿ ಸಂಗ್ರಹಿಸಿದ್ದವರು ಯಾರು ಎಂಬ ಬಗ್ಗೆ ತನಿಖೆ ನಡೆದಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.