ADVERTISEMENT

ಭೂಮಾಪಕರ ನೇಮಕ: ಹೈಕೋರ್ಟ್ ಷರತ್ತು

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2012, 19:30 IST
Last Updated 3 ಡಿಸೆಂಬರ್ 2012, 19:30 IST

ಬೆಂಗಳೂರು: ಭೂಮಾಪಕರ ಹುದ್ದೆಗೆ ನಡೆಯುತ್ತಿರುವ ನೇಮಕಾತಿ, ತಾನು ನೀಡುವ ಅಂತಿಮ ಆದೇಶಕ್ಕೆ ಬದ್ಧವಾಗಿರಬೇಕು ಎಂದು ಹೈಕೋರ್ಟ್ ಸೋಮವಾರ, ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸರ್ಕಾರ ಒಟ್ಟು 1,834 ಭೂಮಾಪಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.

`ಹಿಂದೆ ಈ ಹುದ್ದೆಗಳನ್ನು ಸರ್ವೇ ವಿಷಯದಲ್ಲಿ ಜೆಒಸಿ ಓದಿದ ಅಭ್ಯರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು. ಆದರೆ ಈ ಬಾರಿ ಅದನ್ನು ಎಂಜಿನಿಯರಿಂಗ್, ಡಿಪ್ಲೊಮಾ ಅಧ್ಯಯನ ಮಾಡಿದವರಿಗೂ ಮುಕ್ತಗೊಳಿಸಲಾಗಿದೆ. ಇದು ಸರಿಯಲ್ಲ' ಎಂದು ದೂರಿ ಟಿ. ರಾಮಚಂದ್ರ ಮತ್ತು ಇತರರು ಸಲ್ಲಿಸಿರುವ ಅರ್ಜಿ ಬಗ್ಗೆ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT