ADVERTISEMENT

ಭೂಸ್ವಾಧೀನ ನಿಯಮ ರಚನೆಗೆ ಸಮಿತಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2014, 19:30 IST
Last Updated 1 ಮಾರ್ಚ್ 2014, 19:30 IST

ವಿಜಾಪುರ: ಭೂಸ್ವಾಧೀನಕ್ಕೆ ಸಂಬಂಧಿ­ಸಿದಂತೆ ಹೊಸ ನಿಯಮಾವಳಿ ರೂಪಿಸಲು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆ­ಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಶನಿವಾರ ತಿಳಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿ­ರುವ ಹೊಸ ಭೂಸ್ವಾಧೀನ ಕಾನೂ­ನಿಗೆ ಪೂರಕವಾಗಿ ರಾಜ್ಯ ಸರ್ಕಾರ ಪ್ರತ್ಯೇಕ ನಿಯಮಾವಳಿ ರೂಪಿಸುವ ಈ ಕಾರ್ಯ ತಿಂಗಳಲ್ಲಿ ಪೂರ್ಣ­ಗೊಳ್ಳ­ಲಿದೆ ಎಂದು ಪತ್ರಿಕಾಗೋಷ್ಠಿ­ಯಲ್ಲಿ ಹೇಳಿದರು. ಇದಾದ ನಂತರ ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಲು ಬೇಕಿರುವ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲಾಗುವುದು. ಕೇಂದ್ರ ಸರ್ಕಾರದ ಹೊಸ ಕಾಯ್ದೆ ಪ್ರಕಾ­ರವೇ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು ಎಂದರು.

ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸುಮಾರು ₨30,000 ಕೋಟಿ ಬೇಕಾಗಬಹುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.