ADVERTISEMENT

ಮಂಗನ ಕಾಯಿಲೆ ಜ್ವರದಿಂದ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2018, 19:30 IST
Last Updated 19 ಮಾರ್ಚ್ 2018, 19:30 IST

ತೀರ್ಥಹಳ್ಳಿ: ಮಂಗನ ಕಾಯಿಲೆ ಜ್ವರದಿಂದ ಬಳಲುತ್ತಿದ್ದ ತಾಲ್ಲೂಕಿನ ಬಾಂಡ್ಯಕುಕ್ಕೆ ಗ್ರಾಮ ಪಂಚಾಯ್ತಿಯ ಕುಕ್ಕೆ ಗ್ರಾಮದ ಕೂಲಿ ಕಾರ್ಮಿಕರಾದ ಸಾಕಮ್ಮ (48) ಭಾನುವಾರ ಮೃತಪಟ್ಟಿದ್ದಾರೆ.

ಮಂಗನ ಕಾಯಿಲೆ ಉಲ್ಬಣಗೊಂಡ ಕಾರಣ ಸಾಕಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗನ ಕಾಯಿಲೆ
ಯಿಂದ ಗ್ರಾಮದಲ್ಲಿ ಈ ಹಿಂದೆ ಒಬ್ಬರು ಮೃತಪಟ್ಟಿದ್ದರು.

10 ದಿನಗಳಿಂದ ತೀವ್ರ ಜ್ವರದಿಂದ ಬಳಲಿದ್ದ ಸಾಕಮ್ಮ ಅವರ ದೇಹದಲ್ಲಿ ಮಂಗನ ಕಾಯಿಲೆ ರೋಗಾಣು ಇರುವುದು ದೃಢಪಟ್ಟಿದೆ. ಅವರಿಗೆ ಆರಂಭ
ದಲ್ಲಿ ಪಟ್ಟಣದ ಸರ್ಕಾರಿ ಜೆ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ಮಂಗನಕಾಯಿಲೆ, ಬಾಂಡ್ಯಕುಕ್ಕೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಆದರೆ, ಕಳೆದ ಒಂದೆರಡು ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ರೋಗ
ಹರಡುವ ಪ್ರಮಾಣ ಕ್ಷೀಣಿಸುವ ಸಾಧ್ಯತೆಯೂ ಇದೆ ಎಂಬ ಅಭಿಪ್ರಾಯವನ್ನು ಕೆಲವು ಗ್ರಾಮಸ್ಥರು ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.