ADVERTISEMENT

ಮಂಗಳೂರಲ್ಲಿ ಅಧಿಕ ಮಳೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2013, 19:59 IST
Last Updated 2 ಜೂನ್ 2013, 19:59 IST

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿಯ ಹಲವೆಡೆ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.

ಮಂಗಳೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಚಿಕ್ಕನಾಯಕನಹಳ್ಳಿ 6, ಕೋಟ, ನೆಲಮಂಗಲ 4, ಪಣಂಬೂರು, ಬಂಟ್ವಾಳ 3, ಉಡುಪಿ, ಕಕ್ಕೇರಿ, ಲಿಂಗಸುಗೂರು, ಸಿಂಧನೂರು, ಹಾಸನ, ಸುತ್ತೂರು 2 ಸೆಂ.ಮೀ ಮಳೆಯಾಗಿದೆ.

ಮಂಗಳೂರು ವಿಮಾನ ನಿಲ್ದಾಣ, ಪುತ್ತೂರು, ಸುಳ್ಯ, ಕುಂದಾಪುರ, ಭಟ್ಕಳ, ಬನವಾಸಿ, ಹೊನ್ನಾವರ, ಲೋಂಡ, ಮಸ್ಕಿ, ಮುಧೋಳ, ನಂಜನಗೂಡು, ಬೆಂಗಳೂರು ನಗರ, ಚಿಂತಾಮಣಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.