ADVERTISEMENT

ಮಂಗಳೂರು ಭಾಗದಲ್ಲಿ ಮಳೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2018, 19:30 IST
Last Updated 8 ಏಪ್ರಿಲ್ 2018, 19:30 IST
ಮಂಗಳೂರು ನಗರದಲ್ಲಿ ಭಾನುವಾರ ಸಂಜೆ ಸುರಿದ ಮಳೆಯಲ್ಲೇ ಸ್ಕೂಟರ್ ಸವಾರಿ ಮಾಡಿದ ಯುವತಿ.
ಮಂಗಳೂರು ನಗರದಲ್ಲಿ ಭಾನುವಾರ ಸಂಜೆ ಸುರಿದ ಮಳೆಯಲ್ಲೇ ಸ್ಕೂಟರ್ ಸವಾರಿ ಮಾಡಿದ ಯುವತಿ.   

ಮಂಗಳೂರು: ಮಂಗಳೂರು ನಗರ, ಉಳ್ಳಾಲ, ವಿಟ್ಲ  ಸಹಿತ ಹಲವೆಡೆ ಭಾನುವಾರ ಸಂಜೆ ಗುಡುಗು ಸಹಿತ ಮಳೆ ಸುರಿಯಿತು. ಇದರಿಂದ ಬಿಸಿಲಿನಿಂದ ಬಳಲಿ ಬೆಂಡಾಗಿದ್ದ ಇಳೆ ಸ್ವಲ್ಪ ತಂಪಾಯಿತು.

ಉಳ್ಳಾಲ ಭಾಗದ ತೊಕ್ಕೊಟ್ಟು, ಕುತ್ತಾರು, ದೇರಳಕಟ್ಟೆ, ಕೋಟೆಕಾರು, ತಲಪಾಡಿ ಭಾಗದಲ್ಲಿ ಭಾರಿ ಗಾಳಿ ಸಹಿತ ಒಂದು ಗಂಟೆ ಮಳೆಯಾಯಿತು. ಗುಡುಗು, ಸಿಡಿಲಿನಿಂದ ಕೂಡಿದ್ದ ವರ್ಷಧಾರೆಯಿಂದಾಗಿ ಮಳೆಗಾಲದ ವಾತಾವರಣವನ್ನು ನಿರ್ಮಿಸಿತು.

ವಿಟ್ಲ ಪ್ರದೇಶದಲ್ಲಿ ಸುಮಾರು 10 ನಿಮಿಷ ಗಾಳಿ, ಗುಡುಗು ಸಹಿತ ಮಳೆ ಸುರಿಯಿತು.

ADVERTISEMENT

ಹಲವೆಡೆ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವೆಡೆ ಮಳೆಯಾಗಿದೆ.

ಸಂಕೇಶ್ವರ, ಚಿಂಚೋಳಿ, ಸೈದಾಪುರದಲ್ಲಿ ತಲಾ 1 ಸೆಂ.ಮೀ ಮಳೆ ದಾಖಲಾಗಿದೆ. ಬಳ್ಳಾರಿಯಲ್ಲಿ 40 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಗುಡುಗುಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.