ADVERTISEMENT

ಮಂಜುಳಾ ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2012, 19:30 IST
Last Updated 17 ಆಗಸ್ಟ್ 2012, 19:30 IST

ಬೆಂಗಳೂರು: ಮಂಗಳೂರಿನ ಹೋಂ ಸ್ಟೇ ಮೇಲೆ ಹಿಂದೂ ಜಾಗಹರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ ವೇಳೆ ಅಲ್ಲಿ ಪಾರ್ಟಿ ನಡೆಸುತ್ತಿದ್ದ ಯುವಕರು ಗಾಂಜಾ ಸೇವಿಸಿದ್ದರು ಎಂದು ವರದಿ ನೀಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ.ಮಂಜುಳಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಸಾರ್ವಜನಿಕರ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ನಾಯ್ಡು ಒತ್ತಾಯಿಸಿದರು.

ಹೋಂ ಸ್ಟೇನಲ್ಲಿ ಹುಟ್ಟುಹಬ್ಬ ಆಚರಿಸಲಾಗುತ್ತಿತ್ತು. ಅಲ್ಲಿ ರೇವ್‌ಪಾರ್ಟಿ ನಡೆದಿಲ್ಲ. ಮಾದಕ ವಸ್ತುಗಳು ಪತ್ತೆಯಾಗಿಲ್ಲ ಎಂದು ರಾಜ್ಯ ಗೃಹ ಇಲಾಖೆ, ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ. ಆದರೆ ಮಹಿಳಾ ಆಯೋಗದ ಅಧ್ಯಕ್ಷೆ ಇದಕ್ಕೆ ವ್ಯತಿರಿಕ್ತ ವರದಿ ನೀಡಿ, ಹಲ್ಲೆಕೋರರ ರಕ್ಷಣೆಗೆ ನಿಂತಿದ್ದಾರೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಆರೋಪಿಗಳನ್ನು ರಕ್ಷಿಸುವ ಉದ್ದೇಶದಿಂದಲೇ ಸುಳ್ಳು ವರದಿ ನೀಡಿದ್ದಾರೆ. ಅವರು ಆಯೋಗದ ಅಧ್ಯಕ್ಷರಾದ ನಂತರ ಯಾವ ಮಹಿಳೆಗೂ ರಕ್ಷಣೆ ಸಿಕ್ಕಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.