ADVERTISEMENT

ಮಂಡ್ಯ ಲೋಕಸಭಾ ಉಪ ಚುನಾವಣೆ: ಸುನೀತಾ ಪುಟ್ಟಣ್ಣಯ್ಯ ಸ್ಪರ್ಧೆ?

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2018, 12:28 IST
Last Updated 13 ಅಕ್ಟೋಬರ್ 2018, 12:28 IST
ಸುನೀತಾ ಪುಟ್ಟಣ್ಣಯ್ಯ
ಸುನೀತಾ ಪುಟ್ಟಣ್ಣಯ್ಯ   

ಮಂಡ್ಯ: ಲೋಕಸಭಾ ಉಪ ಚುನಾವಣೆಯಲ್ಲಿ ಸ್ವರಾಜ್‌ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ದಿವಂಗತ ಕೆ.ಎಸ್‌.ಪುಟ್ಟಣ್ಣಯ್ಯ ಅವರ ಪತ್ನಿ ಸುನೀತಾ ಪುಟ್ಟಣ್ಣಯ್ಯ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಜಿಲ್ಲೆಯಾದ್ಯಂತ ಹರಿದಾಡುತ್ತಿದೆ.

ಸ್ವರಾಜ್‌ ಇಂಡಿಯಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಬೆಂಗಳೂರಿನಲ್ಲಿ ಭಾನುವಾರ ನಡೆಯಲಿದ್ದು ಅಲ್ಲಿ ಅಭ್ಯರ್ಥಿಯ ಹೆಸರು ಘೋಷಣೆಯಾಗಲಿದೆ. ಕಾಂಗ್ರೆಸ್‌ ವರಿಷ್ಠರು ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ ನೀಡಲು ಒಪ್ಪಿದ್ದಾರೆ. ಆದರೆ ಸ್ಥಳೀಯವಾಗಿ ಕೆಲ ಕಾಂಗ್ರೆಸ್‌ ಮುಖಂಡರು ಜೆಡಿಎಸ್‌ಗೆ ಬೆಂಬಲ ನೀಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು ಪರೋಕ್ಷವಾಗಿ ಸ್ವರಾಜ್‌ ಇಂಡಿಯಾ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುತ್ತಾರೆ ಎಂದು ಮೂಲಗಳು ತಿಳಿಸಿವೆ.

‘ರೈತಸಂಘದ ಪದಾಧಿಕಾರಿಗಳ ಸಭೆಯಲ್ಲಿ ಐವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ನಂದಿನಿ ಜಯರಾಂ, ಸುನೀತಾ ಪುಟ್ಟಣ್ಣಯ್ಯ, ಎಂ.ವಿ.ರಾಜೇಗೌಡ, ಬಡಗಲಪುರ ನಾಗೇಂದ್ರ ಹಾಗೂ ನನ್ನ ಹೆಸರು ಪಟ್ಟಿಯಲ್ಲಿವೆ. ಈ ಕುರಿತು ಸ್ವರಾಜ್‌ ಇಂಡಿಯಾ ಪಕ್ಷದ ಕಾರ್ಯಕಾರಿಣಿಯಲ್ಲಿ ನಿರ್ಧಾರ ಪ್ರಕಟಗೊಳ್ಳಲಿದೆ’ ಎಂದು ರೈತಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶಂಭೂನಹಳ್ಳಿ ಸುರೇಶ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.