ADVERTISEMENT

ಮಗಳ ಮೇಲೆ ಅತ್ಯಾಚಾರ: ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2017, 19:30 IST
Last Updated 17 ಜೂನ್ 2017, 19:30 IST

ಹಾವೇರಿ: ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಅಪ್ಪನಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ ಆದೇಶಿಸಿದೆ.

ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ವ್ಯಕ್ತಿಗೂ 8 ತಿಂಗಳ ಜೈಲು ಹಾಗೂ ₹ 20 ಸಾವಿರ ದಂಡ ವಿಧಿಸಲಾಗಿದೆ.

ಹಾವೇರಿಯ ಬರಡಿ ಗ್ರಾಮದ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾಗಿ ಆತನ ಹೆಂಡತಿಯೇ ಹಾವೇರಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಮುಚ್ಚಿಹಾಕಲು ಸಂಬಂಧಿಯೊಬ್ಬರು ನೆರವಾಗಿದ್ದಾಗಿಯೂ ದೂರಿನಲ್ಲಿ ತಿಳಿಸಲಾಗಿತ್ತು.

ADVERTISEMENT

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಈ.ಕೆ. ಭೂತೆ, ತಪ್ಪಿತಸ್ಥರಿಗೆ ಪೋಕ್ಸೊ ಕಾಯ್ದೆ ಅಡಿ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.