ADVERTISEMENT

ಮಗಳ ಮೇಲೆ ಅತ್ಯಾಚಾರ: ಬಂಧನ

​ಪ್ರಜಾವಾಣಿ ವಾರ್ತೆ
Published 30 ಮೇ 2018, 19:30 IST
Last Updated 30 ಮೇ 2018, 19:30 IST

ಚಿಕ್ಕಮಗಳೂರು: 16 ವರ್ಷದ ಮಗಳ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದ ತಂದೆಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಯು ಪಾನಮತ್ತನಾಗಿ ಮಂಗಳವಾರ ರಾತ್ರಿ ಮಗಳನ್ನು ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನು ನೋಡಿದ ಆರೋಪಿಯ ಪತ್ನಿ ಮಗಳನ್ನು ವಿಚಾರಿಸಿದ್ದಾರೆ. ಆಗ ಹಲವು ಬಾರಿ ಅತ್ಯಾಚಾರ ಎಸಗಿರುವುದು ಗೊತ್ತಾಗಿದೆ.

‘ವಿಷಯವನ್ನು ತಾಯಿಗೆ ಅಥವಾ ಬೇರೆ ಯಾರಿಗಾದರೂ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ’ ಎಂದು ಆರೋಪಿಯ ವಿರುದ್ಧ ಪತ್ನಿ ನಗರದ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.