ADVERTISEMENT

ಮತ್ತೆ ಹೈಕೋರ್ಟ್‌ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 19:30 IST
Last Updated 20 ಏಪ್ರಿಲ್ 2018, 19:30 IST
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ   

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶ ಎತ್ತಿ ಹಿಡಿದಿರುವ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಕ್ರಮವನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪುನಃ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

‘ಅರ್ಜಿ ಇತ್ಯರ್ಥವಾಗುವರೆಗೂ ವರ್ಗಾವಣೆ ಆದೇಶಕ್ಕೆ ತಡೆ ನೀಡಬೇಕು’ ಎಂದು ಅವರು ಮಧ್ಯಂತರ ಮನವಿ ಮಾಡಿದ್ದಾರೆ. ಈ ಅರ್ಜಿ ಸೋಮವಾರ (ಏ.23) ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರುವ ನಿರೀಕ್ಷೆ ಇದೆ.

‘ನನ್ನ ವಾದ ಆಲಿಸದೇ ರೋಹಿಣಿ ಅರ್ಜಿ ಕುರಿತು ಯಾವುದೇ ಆದೇಶ ಹೊರಡಿಸಬಾರದು’ ಎಂದು ರಂದೀಪ್ ಅರ್ಜಿಯಲ್ಲಿ ಕೋರಿದ್ದಾರೆ.

ADVERTISEMENT

ಹಾಸನದ ಹಾಲಿ ಜಿಲ್ಲಾಧಿಕಾರಿಯಾಗಿರುವ ರಂದೀಪ್ ಕೂಡಾ ಹೈಕೋರ್ಟ್‌ಗೆ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.