ADVERTISEMENT

ಮಧ್ಯ ಪ್ರವೇಶಿಸುವುದಿಲ್ಲ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2018, 19:37 IST
Last Updated 28 ಫೆಬ್ರುವರಿ 2018, 19:37 IST
ಮಧ್ಯ ಪ್ರವೇಶಿಸುವುದಿಲ್ಲ: ಹೈಕೋರ್ಟ್‌
ಮಧ್ಯ ಪ್ರವೇಶಿಸುವುದಿಲ್ಲ: ಹೈಕೋರ್ಟ್‌   

ಬೆಂಗಳೂರು: ‘ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯ ಪ್ರಕ್ರಿಯೆ ಕುರಿತ ತಕರಾರುಗಳಲ್ಲಿ ಮಧ್ಯ ಪ್ರವೇಶಿಸಲು ಇಚ್ಛಿಸುವುದಿಲ್ಲ’ ಎಂದು ಹೈಕೋರ್ಟ್‌ ಹೇಳಿದೆ.

ಈ ಕುರಿತಂತೆ 60 ಅರ್ಜಿಗಳ ಮೇಲಿನ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿದೆ.

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ-1993ರ ಕಲಂ 49 (1)ರ ಅಡಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯಗಳ ಮೇಲಿನ ರಿಟ್‌ ಅರ್ಜಿಗಳಲ್ಲಿ ಕೋರ್ಟ್‌ ಮಧ್ಯ ಪ್ರವೇಶಿಸಲು ಬಯಸುವುದಿಲ್ಲ’ ಎಂದು ಹೇಳಿದೆ.

ADVERTISEMENT

ಆದಾಗ್ಯೂ, ‘ಪಂಚಾಯತ್‌ ರಾಜ್‌ ಇಲಾಖೆ 2018ರ ಫೆಬ್ರುವರಿ 7ರಂದು ಹೊರಡಿಸಿರುವ ಸುತ್ತೋಲೆ ಪ್ರಕಾರ ಇನ್ನು ಮುಂದೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬೇಕಾದರೆ ಅದನ್ನು ಉಪವಿಭಾಗಾಧಿಕಾರಿ ಗಮನಕ್ಕೆ ತರಬೇಕು. ನಿರ್ದಿಷ್ಟ ಆರೋಪಗಳಿದ್ದರೆ ಮಾತ್ರ ಅವುಗಳನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಬೇಕು’ ಎಂದೂ ವಿವರಿಸಿದೆ.

ಪ್ರಕರಣವೇನು?: 60ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಆಯಾ ಪಂಚಾಯಿತಿ ಉಪ ವಿಭಾಗಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು. ಈ ನೋಟಿಸ್ ಮತ್ತು ಅವಿಶ್ವಾಸ ನಿರ್ಣಯ ಮಂಡನೆ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.