ADVERTISEMENT

ಮನೆಯಲ್ಲಿದ್ದರೂ 60 ಸ್ಥಾನ ಗೆಲ್ಲುತ್ತೇವೆ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2017, 19:38 IST
Last Updated 6 ಡಿಸೆಂಬರ್ 2017, 19:38 IST
ಕುಮಾರಸ್ವಾಮಿ
ಕುಮಾರಸ್ವಾಮಿ   

ಬೆಂಗಳೂರು: ‘ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗದೆ ಮನೆಯಲ್ಲಿದ್ದರೂ ನಾವು 50ರಿಂದ 60 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

‘ಆದರೆ, ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರಲು 113 ಕ್ಷೇತ್ರ
ಗಳಲ್ಲಿ ಗೆಲ್ಲುವುದು ನನ್ನ ಗುರಿ. ಹೀಗಾಗಿ ಇನ್ನುಳಿದ 105 ಕ್ಷೇತ್ರಗಳಲ್ಲಿ 70ರಿಂದ 80 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕು ಎಂಬ ಗುರಿಯೊಂದಿಗೆ ಹೊರಟಿದ್ದೇವೆ. ಇದ
ಕ್ಕಾಗಿ ಗೆಲ್ಲುವ ಸಾಮರ್ಥ್ಯ ಇರುವ 170 ಕ್ಷೇತ್ರಗಳ‌ಲ್ಲಿ ಮಾತ್ರ ಪ್ರಚಾರವನ್ನು ಕೇಂದ್ರೀಕರಿಸಲಾಗುವುದು’ ಎಂದು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

‘ಕಳೆದ ಚುನಾವಣೆಯಲ್ಲಿ ಗೆಲ್ಲಲೇಬೇಕಿದ್ದ 30 ಕ್ಷೇತ್ರಗಳಲ್ಲಿ ನಮ್ಮ ಪಕ್ಷದಲ್ಲಿನ ಅಭ್ಯರ್ಥಿಗಳ ಪೈಪೋಟಿಯನ್ನು ಸರಿಯಾಗಿ ನಿಭಾ
ಯಿಸದ ಕಾರಣಕ್ಕೆ ಸೋತಿದ್ದೇವೆ. ಈ ಬಾರಿ ಬಂಡಾಯಕ್ಕೆ ಅವಕಾಶ ನೀಡದೆ ಸೌಹಾರ್ದವಾಗಿ ಬಗೆಹರಿಸುತ್ತೇವೆ’ ಎಂದು ಹೇಳಿದರು.

ADVERTISEMENT

‘ಎರಡು ಸಾರ್ವತ್ರಿಕ ಚುನಾವಣೆಗಳಲ್ಲಿ 224 ಕ್ಷೇತ್ರಗಳಲ್ಲೂ ಪ್ರಚಾರ ನಡೆಸಿದ್ದೆ. ಹೀಗಾಗಿ ಗೆಲ್ಲುವ ಸಾಮರ್ಥ್ಯ ಇರುವ ಕ್ಷೇತ್ರಗಳಿಗೆ ಹೆಚ್ಚು ಗಮನ ಕೊಡಲು ಸಾಧ್ಯವಾಗಲಿಲ್ಲ. ಅದೇ ತಪ್ಪನ್ನು ಈ ಬಾರಿ ಮಾಡುವುದಿಲ್ಲ’ ಎಂದರು.

ಅದಾನಿ ಕಂಪೆನಿಗೆ ಮಣೆ

‘ನಮ್ಮ ಸರ್ಕಾರದ ಅವಧಿಯಲ್ಲಿ ಕಪ್ಪುಪಟ್ಟಿಗೆ ಸೇರಿಸಿದ್ದ ಅದಾನಿ ಕಂಪೆನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣೆ ಹಾಕಿದ್ದಾರೆ’ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

‘ಅದಾನಿ ಕಂಪೆನಿ ಗುಜರಾತ್‌ ಮತ್ತು ಮಧ್ಯ ಪ್ರದೇಶದಲ್ಲಿ ಚೆನ್ನಾಗಿ ವ್ಯಾಪಾರ ಮಾಡಿಕೊಂಡಿದೆ. ವಿದ್ಯುತ್‌ ಪಡೆಯದಿದ್ದರೂ ಒಪ್ಪಂದದ ಪ್ರಕಾರ ಎರಡು ರಾಜ್ಯ ಸರ್ಕಾರಗಳು ಹಣ ಪಾವತಿಸುತ್ತಿವೆ. ಅದೇ ಕಂಪೆನಿಯಿಂದ ವಿದ್ಯುತ್ ಖರೀದಿಗೆ ಈಗ ರಾಜ್ಯ ಸರ್ಕಾರ ಮುಂದಾಗಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.