ಚಿತ್ರದುರ್ಗ: ಮಲೆನಾಡಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಆ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಮಾಡುವ ಬಗ್ಗೆ ಯೋಚಿಸಲಾಗುವುದು’ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದ ರೈತ ಸಂಪರ್ಕ ಕೇಂದ್ರದಲ್ಲಿ ಗುರುವಾರ ಕೃಷಿ ಯಂತ್ರೋಪಕರಣಗಳ ಬಾಡಿಗೆ ಆಧಾರಿತ ಸೇವಾ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಜಲಾಶಯಗಳಿಗೆ ನೀರು ಪೂರೈಸುವಂತಹ ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕಾವೇರಿ, ಹೇಮಾವತಿ, ತುಂಗಭದ್ರಾ ಜಲಾಶಯಗಳಲ್ಲಿ ಒಳಹರಿವು ಕಡಿಮೆ ಇದೆ. ಮಳೆಯಾಗಲು ಇನ್ನೂ ಎರಡು ತಿಂಗಳು ಅವಕಾಶವಿದೆ. ಆದರೂ ಸಹ ಮೋಡ ಬಿತ್ತನೆಗೆ ಯೋಚಿಸಿದ್ದು ಇದಕ್ಕೆ ಮುಖ್ಯಮಂತ್ರಿಗಳು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ. ಮೋಡ ಬಿತ್ತನೆಗೆ ಒಂದು ವಾರದಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.