
ಪ್ರಜಾವಾಣಿ ವಾರ್ತೆಶಿವಮೊಗ್ಗ: ವಿಮರ್ಶಕಿ ಡಾ.ಮಲ್ಲಿಕಾ ಘಂಟಿ, ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ (ಆಡಳಿತ) ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಬಳ್ಳಾರಿ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಸಂಡೂರಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕರಾಗಿದ್ದ ಮಲ್ಲಿಕಾ ಘಂಟಿ ಅವರನ್ನು ಸರ್ಕಾರ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಕ ಮಾಡಿತ್ತು.
ಮಂಗಳವಾರ ಕುಲಸಚಿವ ಪ್ರೊ.ರಾಮೇಗೌಡ ಅವರಿಂದ ಮಲ್ಲಿಕಾ ಘಂಟಿ ಅಧಿಕಾರ ಸ್ವೀಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.