ADVERTISEMENT

ಮಳೆ ಅವಘಡ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 5 ಜೂನ್ 2018, 19:30 IST
Last Updated 5 ಜೂನ್ 2018, 19:30 IST

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಸಿಡಿಲು ಬಡಿದು ರೈತ ಹಾಗೂ ಮನೆಯ ಚಾವಣಿ ಬಿದ್ದು ವೃದ್ಧೆ ಮೃತಪಟ್ಟಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ 4–5 ದಿನಗಳಿಂದ ಸುರಿದ ಮಳೆಗೆ 200ಕ್ಕೂ ಹೆಚ್ಚು ಮನೆಗಳಿಗೆ ತೀವ್ರ ಹಾನಿಯಾಗಿದೆ.

ಗದಗ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಮಂಗಳವಾರ ನಸುಕಿನಲ್ಲಿ ಮನೆಯೊಂದರ ಚಾವಣಿ ಬಿದ್ದು, ಮಲ್ಲವ್ವ ಜಲಾಲ್‌ ಕಟ್ಟೀಮನಿ (56) ಎಂಬುವವರು ಸ್ಥಳದಲ್ಲೇ
ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ತಳಲೂರು ಗ್ರಾಮದಲ್ಲಿ ಮಂಗಳವಾರ ಸಿಡಿಲು ಬಡಿದು ರೈತ ಹುಚ್ಚಪ್ಪ (46) ಮೃತಪಟ್ಟಿದ್ದಾರೆ. ಅವರ ಎತ್ತು ಮೃತಪಟ್ಟಿದೆ.

ADVERTISEMENT

ಧಾರವಾಡ ತಾಲ್ಲೂಕಿನ ಎಂಟು ಗ್ರಾಮಗಳ 15 ರೈತರಿಗೆ ಸೇರಿದ 40 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ನೆಲಕಚ್ಚಿದೆ.

ಬೆಳಗಾವಿಯಲ್ಲಿ ಮಂಗಳವಾರ ಮಧ್ಯಾಹ್ನ ಒಂದೂವರೆ ತಾಸು ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.