ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ನಿಲ್ಕುಂದಲ್ಲಿ ಅತಿ ಹೆಚ್ಚು 9 ಸೆಂ.ಮೀ ಮಳೆಯಾಗಿದೆ. ಕೊಲ್ಲೂರು, ಕದ್ರಾ 8, ಗೇರುಸೊಪ್ಪ, ಜೋಯಿಡಾ 7, ಲೊಂಡ 6, ಆಗುಂಬೆ 5, ಯಲ್ಲಾಪುರ, ತಾಳಗುಪ್ಪ 4 ಸೆಂ.ಮೀ ಮಳೆಯಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೆ ರಾಜ್ಯದ ಕರಾವಳಿ ಸೇರಿದಂತೆ ರಾಜ್ಯದ ಉತ್ತರ ಒಳಡು ಮತ್ತು ರಾಜ್ಯದ ದಕ್ಷಿಣ ಘಟ್ಟ ಪ್ರದೇಶಗಳು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.