ADVERTISEMENT

ಮಳೆ ಹಾನಿ: ಇಂದಿನಿಂದ ಸಿ.ಎಂ ಪ್ರವಾಸ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2014, 19:30 IST
Last Updated 13 ಮಾರ್ಚ್ 2014, 19:30 IST

ಬೆಂಗಳೂರು: ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಶುಕ್ರವಾರದಿಂದ ಎರಡು ದಿನ ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ.

ಈಚೆಗೆ ಸುರಿದ ಆಲಿಕಲ್ಲು ಮಳೆಯಿಂದ  ಬೆಳಗಾವಿ, ವಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಲಕ್ಷಾಂತರ ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

ಶುಕ್ರವಾರ ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಅಥಣಿ, ವಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕುಗಳಲ್ಲಿ ಪ್ರವಾಸ ಮಾಡಿ ಮಳೆಯಿಂದ ಸಂತ್ರಸ್ತ­ರಾದ ಕುಟುಂಬ ಗಳ ಸದಸ್ಯರನ್ನು ಭೇಟಿ ಮಾಡಲಿದ್ದಾರೆ.

ಶನಿವಾರ (ಮಾ.15) ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನಲ್ಲಿ ಹಾನಿಗೊಳಗಾದ ಪ್ರದೇಶಗಳಲ್ಲಿ ಪ್ರವಾಸ ಮಾಡಿ ಪರಿಶೀಲನೆ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.