ADVERTISEMENT

ಮಹದೇಶ್ವರ ಬೆಟ್ಟದಲ್ಲಿ 12 ಸೆಂ.ಮೀ. ಮಳೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2017, 19:30 IST
Last Updated 11 ಅಕ್ಟೋಬರ್ 2017, 19:30 IST
ಮಹದೇಶ್ವರ ಬೆಟ್ಟದಲ್ಲಿ 12 ಸೆಂ.ಮೀ. ಮಳೆ
ಮಹದೇಶ್ವರ ಬೆಟ್ಟದಲ್ಲಿ 12 ಸೆಂ.ಮೀ. ಮಳೆ   

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯ ಹಲವೆಡೆ ಮತ್ತು ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಮಹದೇಶ್ವರಬೆಟ್ಟ 12, ನೆಲಮಂಗಲ 11, ಯಗಚಿ 6, ಇಂಡಿ, ಅಳಂದ, ಚಿಕ್ಕಮಗಳೂರು, ಯಳಂದೂರು, ಶ್ರೀನಿವಾಸಪುರ ತಲಾ 5, ಸಿದ್ದಾಪುರ, ಕಡೂರು, ಸರಗೂರು, ಚಾಮರಾಜನಗರ, ಕೊಳ್ಳೆಗಾಲ, ಹೊನಕೆರೆ, ಚನ್ನಪಟ್ಟಣದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ.

ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.