ADVERTISEMENT

‘ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ 5ರಂದು’

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2017, 19:30 IST
Last Updated 3 ಅಕ್ಟೋಬರ್ 2017, 19:30 IST

ಬೆಂಗಳೂರು: ‘ವಿಧಾನಸೌಧ ಆವರಣದಲ್ಲಿ, ಮಹರ್ಷಿ ವಾಲ್ಮೀಕಿ ತಪೋವನದಲ್ಲಿ ನೂತನವಾಗಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ 5ರಂದು ಲೋಕಾರ್ಪಣೆ ಮಾಡಲಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ತಿಳಿಸಿದರು.

‘ಅದೇ ದಿನ ಬೆಳಿಗ್ಗೆ ವಿಧಾನಸೌಧದ ಪೂರ್ವಭಾಗದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಪ್ರಸಕ್ತ ಸಾಲಿನ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡುವರು’ ಎಂದರು.

ಶೈಕ್ಷಣಿಕವಾಗಿ ಮತ್ತು ಉದ್ಯೋಗದಲ್ಲಿ ಶೇ 7.5 ರಷ್ಟು ಮೀಸಲಾತಿ ನೀಡಬೇಕು, ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ಆರಂಭಿಸಬೇಕು, ರಾಜ್ಯದ ಒಂದು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರಿಡಬೇಕು, ಎಲ್ಲ ಶಾಲಾ ಕಾಲೇಜುಗಳ ಗ್ರಂಥಾಲಯಗಳಿಗೆ ಮೂಲ ರಾಮಾಯಣ ಗ್ರಂಥವನ್ನು ಪೂರೈಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದೂ ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.