
ಪ್ರಜಾವಾಣಿ ವಾರ್ತೆದಾವಣಗೆರೆ: ಮಾಜಿ ಶಾಸಕ ಮಹಿಮ ಪಟೇಲ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಅವರು ಕಣಕ್ಕೆ ಇಳಿಯುವುದು ಖಚಿತವಾಗಿದೆ.
‘ಬೆಂಗಳೂರಿನಲ್ಲಿ ಮಾರ್ಚ್ 21ರಂದು ಕುಮಾರಸ್ವಾಮಿ, ದೇವೇಗೌಡ ಹಾಗೂ ಮಹಿಮ ಪರಸ್ಪರ ಚರ್ಚಿಸಲಿದ್ದು, ಅಂದೇ ಜೆಡಿಎಸ್ ಸೇರಲಿದ್ದಾರೆ. ಪಕ್ಷ ಅವರಿಗೆ ‘ಬಿ’ ಫಾರಂ ನೀಡಲಿದ್ದು, ದಾವಣಗೆರೆಯಿಂದ ಸ್ಪರ್ಧಿಸುವುದು ಖಚಿತ’ ಎಂದು ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಗುಡ್ಡಪ್ಪ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.