ADVERTISEMENT

ಮಹಿಳಾ ವಿವಿಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2012, 19:30 IST
Last Updated 3 ಏಪ್ರಿಲ್ 2012, 19:30 IST

ವಿಜಾಪುರ: ಇಲ್ಲಿಯ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ ಕಳೆದ ಜನವರಿ ಮತ್ತು ಫೆಬ್ರುವರಿ ತಿಂಗಳಲ್ಲಿ ನಡೆಸಿದ್ದ ವಿವಿಧ ಕೋರ್ಸ್‌ಗಳ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.

ಸ್ನಾತಕೋತ್ತರ ಎಂ.ಎ., ಹಿಂದಿ, ಉರ್ದು, ಅರ್ಥಶಾಸ್ತ್ರ, ಇಂಗ್ಲಿಷ್, ಸಮಾಜಶಾಸ್ತ್ರ, ಎಂ.ಎಸ್ಸಿ., ಬಯೊ ಟೆಕ್ನಾಲಜಿ, ಬಯೊ ಇನ್‌ಫಾರಮ್ಯೋಟಿಕ್ಸ್, ಫಾರ್ಮಾಸ್ಯೂಟಿಕಲ್, ರಸಾಯನಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈಯನ್ಸ್ ವಿಭಾಗಗಳ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಹಾಗೂ ಸಮಾಜಶಾಸ್ತ್ರ, ಮಹಿಳಾ ಅಧ್ಯಯನ ವಿಭಾಗದ ತೃತೀಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದೆ.

ಫಲಿತಾಂಶ ವಿವಿಯ ವೆಬ್‌ಸೈಟ್‌ನಲ್ಲೂ ಲಭ್ಯ ಎದು ಮೌಲ್ಯಮಾಪನ ಕುಲಸಚಿವೆ ಪ್ರೊ.ಡಿ.ಎಚ್.ತೇಜಾವತಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.