ಬೆಂಗಳೂರು: ವಿಶ್ವ ಮಹಿಳಾ ದಿನದ ಅಂಗವಾಗಿ ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಮಹಿಳೆಯರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು. ಪ್ರಾಸ್ತಾವಿಕ ಮಾತುಗಳನ್ನಾಡಿದ ಸಭಾಧ್ಯಕ್ಷ ಡಿ.ಎಚ್. ಶಂಕರಮೂರ್ತಿ, ಸಾಧನೆ ತೋರಿದ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದರು.
ಬಿಜೆಪಿಯ ಎಸ್.ಆರ್. ಲೀಲಾ, ಭಾರತಿ ಶೆಟ್ಟಿ, ವಿಮಲಾಗೌಡ ಅವರು ಮೊದಲಿಗೆ ಮಾತನಾಡಿ ಮಹಿಳೆಯರ ಸೇವೆಗಳನ್ನು ಸ್ಮರಿಸಿದರು. ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ಕಿರುಕುಳ ತಡೆಯಲು ಸಾಧ್ಯವಾದರೆ ಈ ದಿನಕ್ಕೆ ಅರ್ಥ ಬರುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
‘ಹೆಣ್ಣು ಸಮಾಜದ ಕಣ್ಣು’ ಎನ್ನುವ ಮಾತು ಕೇವಲ ತೋರಿಕೆಯ ಮಾತಾಗಿ ಉಳಿದಿದೆ ಎಂದು ಹೇಳಿದ ವಿಮಲಾ ಗೌಡ, ‘ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯದಿದ್ದರೆ ಮುಂದೊಂದು ದಿನ ಗಂಡುಮಕ್ಕಳಿಗೆ ಮದುವೆಯಾಗಲು ಹೆಣ್ಣುಗಳೇ ಸಿಗುವುದಿಲ್ಲ’ ಎಂದು ಹೇಳಿದರು. ಕಾಂಗ್ರೆಸ್ಸಿನ ಎಸ್.ಆರ್.ಪಾಟೀಲ್ ಹಾಗೂ ವೀರಣ್ಣ ಮತ್ತಿಕಟ್ಟಿ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.