ADVERTISEMENT

ಮಹಿಳೆಯರ ಸುರಕ್ಷತೆ ಬಗ್ಗೆ ಗಮನಹರಿಸದ ಕೇಂದ್ರ: ಕಾಂಗ್ರೆಸ್ ಆರೋಪ

​ಪ್ರಜಾವಾಣಿ ವಾರ್ತೆ
Published 5 ಮೇ 2018, 9:33 IST
Last Updated 5 ಮೇ 2018, 9:33 IST
ಮಹಿಳೆಯರ ಸುರಕ್ಷತೆ ಬಗ್ಗೆ ಗಮನಹರಿಸದ ಕೇಂದ್ರ: ಕಾಂಗ್ರೆಸ್ ಆರೋಪ
ಮಹಿಳೆಯರ ಸುರಕ್ಷತೆ ಬಗ್ಗೆ ಗಮನಹರಿಸದ ಕೇಂದ್ರ: ಕಾಂಗ್ರೆಸ್ ಆರೋಪ   

ಹುಬ್ಬಳ್ಳಿ: ಮಹಿಳಾ ಸುರಕ್ಷತೆ ವಿಚಾರವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸುಶ್ಮೀತಾ ದೇವ್ ಆರೋಪಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸುರಕ್ಷತೆ ಮತ್ತು ಸಬಲೀಕರಣದ ಬಗ್ಗೆ ಮೋದಿ ಮತ್ತು ಸಚಿವೆ ಸ್ಮೃತಿ ಇರಾನಿ ಸಂಸತ್ತಿನ ಒಳಗೆ ಮತ್ತು ಹೊರಗೆ ಉದ್ದುದ್ದ ಭಾಷಣ ಮಾಡುತ್ತಾರೆ. ಆದರೆ, ದೇಶದಲ್ಲಿ ಇತ್ತೀಚೆಗೆ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಬಾಯಿಬಿಡುತ್ತಿಲ್ಲ ಎಂದು ದೂರಿದರು.

ಕಾಶ್ಮೀರದಲ್ಲಿ ಅತ್ಯಾಚಾರಿಗಳನ್ನು ಬೆಂಬಲಿಸುವ ವ್ಯಕ್ತಿಯನ್ನೇ ಬಿಜೆಪಿಯವರು ಉಪ ಮುಖ್ಯಮಂತ್ರಿ ಮಾಡಿದ್ದಾರೆ ಎಂದು ದೇವ್ ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.