ADVERTISEMENT

ಮಹಿಷಿ ವರದಿ ಕಾನೂನು ವ್ಯಾಪ್ತಿಗೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2017, 19:30 IST
Last Updated 1 ಫೆಬ್ರುವರಿ 2017, 19:30 IST
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಬುಧವಾರ ಸಲ್ಲಿಸಿದ ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ‘ಮುಖ್ಯಮಂತ್ರಿ’ ಚಂದ್ರು, ಸಚಿವ ಟಿ.ಬಿ. ಜಯಚಂದ್ರ, ಹೇಮಲತಾ ಮಹಿಷಿ, ಗೊ.ರು. ಚನ್ನಬಸಪ್ಪ, ರಾ.ನಂ. ಚಂದ್ರಶೇಖರ್, ಪ್ರೊ. ಚಂದ್ರಶೇಖರ ಪಾಟೀಲ ಇದ್ದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಬುಧವಾರ ಸಲ್ಲಿಸಿದ ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ‘ಮುಖ್ಯಮಂತ್ರಿ’ ಚಂದ್ರು, ಸಚಿವ ಟಿ.ಬಿ. ಜಯಚಂದ್ರ, ಹೇಮಲತಾ ಮಹಿಷಿ, ಗೊ.ರು. ಚನ್ನಬಸಪ್ಪ, ರಾ.ನಂ. ಚಂದ್ರಶೇಖರ್, ಪ್ರೊ. ಚಂದ್ರಶೇಖರ ಪಾಟೀಲ ಇದ್ದರು.   

ಬೆಂಗಳೂರು: ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಸಂಬಂಧಿಸಿದಂತೆ ಸಂಪುಟ ಸಭೆಯಲ್ಲಿ ಚರ್ಚಿಸಿ, ಕಾನೂನು ಇಲಾಖೆ ಸಲಹೆ ಪಡೆದು ಕಾಯ್ದೆ ರೂಪಿಸುವ ನಿಟ್ಟಿನಲ್ಲಿ ಚಿಂತಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಸಲ್ಲಿಸಿದ ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಈ ವರದಿಯಲ್ಲಿ ಎರಡು ಭಾಗಗಳಿವೆ. ಇನ್ನೂ ಓದಿಲ್ಲ ಎಂದರು.

ಖಾಸಗಿ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಹೆಚ್ಚುತ್ತಿರುವುದರಿಂದ ಸದ್ಯ ಇರುವ ಮೀಸಲಾತಿ ವ್ಯವಸ್ಥೆ ಮಹತ್ವ ಕಳೆದುಕೊಳ್ಳುತ್ತಿದೆ. ಕೈಗಾರಿಕೆಗಳ ಬೆಳವಣಿಗೆ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ ಗಮನಿಸಿ ಮೀಸಲಾತಿ ನಿಗದಿಪಡಿಸಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ಸಿಗಬೇಕು. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯ ಇಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.

ಪ್ರೊ. ಎಸ್. ಜಿ. ಸಿದ್ದರಾಮಯ್ಯ ಮಾತನಾಡಿ, ‘ಸರೋಜಿನಿ ಮಹಿಷಿ ವರದಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಇಂದಿನ ಕಾಲಘಟ್ಟಕ್ಕೆ ಹೊಂದುವಂತೆ ಪರಿಷ್ಕರಿಸಲಾಗಿದೆ. ವರದಿಯಲ್ಲಿನ ಅಂಶಗಳನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಕಾಯ್ದೆ ರೂಪಿಸಬೇಕು’ ಎಂದರು.

ವರದಿಯಲ್ಲಿರುವ ಪ್ರಮುಖ ಅಂಶಗಳು
*ಐ.ಟಿ, ಬಿ.ಟಿ ಸೇರಿದಂತೆ ಎಲ್ಲ ಖಾಸಗಿ ವಲಯದಲ್ಲಿ ‘ಸಿ’, ‘ಡಿ’ ವರ್ಗದ ಹುದ್ದೆಗಳಲ್ಲಿ ಶೇ 100ರಷ್ಟು ಮತ್ತು ಉನ್ನತ ಹುದ್ದೆಗಳಲ್ಲಿ ಶೇ 80ರಷ್ಟು ಕನ್ನಡಿಗರಿಗೆ ಮೀಸಲಿಡಬೇಕು.
*ರಾಜ್ಯದಲ್ಲಿರುವ ಸರ್ಕಾರಿ ವಲಯದ ಉದ್ಯಮಗಳಲ್ಲಿ ಎಲ್ಲ ಹುದ್ದೆಗಳಿಗೆ ಕನ್ನಡಿಗರನ್ನೇ ಆಯ್ಕೆ ಮಾಡಬೇಕು.
*ನೂರಕ್ಕೂ ಹೆಚ್ಚು ನೌಕರರಿರುವ ಉದ್ಯಮಗಳಲ್ಲಿ ನೇಮಕಾತಿ ಆಯ್ಕೆ ಸಮಿತಿಯಲ್ಲಿ ರಾಜ್ಯ ಸರ್ಕಾರದ ಕನ್ನಡ ಪ್ರತಿನಿಧಿ ಇರಬೇಕು.
*ಕನ್ನಡದಲ್ಲಿ ‘ಉದ್ಯೋಗ ವಾರ್ತೆ’ ಪ್ರಕಟಿಸಬೇಕು.
*ಐ.ಸಿ.ಎಸ್‌.ಸಿ, ಸಿ.ಬಿ.ಎಸ್‌.ಇ, ಕೇಂದ್ರೀಯ ವಿದ್ಯಾಲಯ ಸೇರಿದಂತೆ ಎಲ್ಲ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 10ನೇ ತರಗತಿವರೆಗೆ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಕಡ್ಡಾಯ ಮಾಡಬೇಕು.
*ರಾಷ್ಟ್ರೀಯ ಉದ್ಯೋಗ ನೀತಿ ರೂಪಿಸಲು ಎಲ್ಲ ಮುಖ್ಯಮಂತ್ರಿಗಳ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಆಗ್ರಹಿಸಬೇಕು.
*ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಎಲ್ಲ ಭಾಷೆಗಳಲ್ಲೂ ನಡೆಸುವಂತೆ ಕೇಂದ್ರ ಹಣಕಾಸು ಸಚಿವರನ್ನು ಒತ್ತಾಯಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT