
ಪ್ರಜಾವಾಣಿ ವಾರ್ತೆ
ವಿಜಯಪುರ: ವಿಧಾನ ಪರಿಷತ್ ನ ಮಾಜಿ ಸದಸ್ಯ ಸಿದ್ದಯ್ಯ ದುಂಡಯ್ಯ ಕರ್ಪೂರಮಠ (88) ಭಾನುವಾರ ನಿಧನರಾದರು.
ಇವರಿಗೆ ಮೂವರು ಗಂಡು ಮಕ್ಕಳು, ಪುತ್ರಿ ಇದ್ದಾರೆ.
ಸಂಜೆ ನಾಲ್ಕು ಗಂಟೆಗೆ ಮೃತರ ಸ್ವಗೃಹದ ಬಳಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಎಸ್.ಡಿ.ಕರ್ಪೂರಮಠ 2000-2006ರವರೆಗೂ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.