ADVERTISEMENT

ಮಾಜಿ ಶಾಸಕ ಡಿ.ಬಿ.ಗಂಗಾಧರಪ್ಪ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2012, 19:30 IST
Last Updated 3 ಡಿಸೆಂಬರ್ 2012, 19:30 IST

ಅರಸೀಕೆರೆ: ಮಾಜಿ ಶಾಸಕ, ಹಿರಿಯ ರಾಜಕಾರಣಿ ಡಿ.ಬಿ. ಗಂಗಾಧರಪ್ಪ (82) ಸೋಮವಾರ ಮಧ್ಯಾಹ್ನ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ ಪತ್ನಿ, ಮೂವರು ಪುತ್ರರು ಹಾಗೂ ಒಬ್ಬ ಪುತ್ರಿ ಇ್ದ್ದದಾರೆ.

1979ರಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆಗೆ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ ಪಕ್ಷೇತರರಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. 1985ರಲ್ಲಿ ರಾಮಕೃಷ್ಣ ಹೆಗಡೆ ನೇತೃತ್ವದ ಜನತಾ ಪಕ್ಷದಿಂದ ಸ್ಪರ್ಧಿಸಿ ಆಯ್ಕೆಯಾಗಿ 1989ರ ವರೆಗೆ ಕಾರ್ಯನಿರ್ವಹಿಸಿದ್ದರು. ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.

ಉತ್ತಮ ರಾಜಕಾರಣಿ ಎಂದು ಹೆಸರು ವಾಸಿಯಾಗ್ದ್ದಿದ ಗಂಗಾಧರಪ್ಪ ಅವರನ್ನು ಗ್ರಾಮಾಂತರ ಪ್ರದೇಶದ ಜನರು ಪ್ರೀತಿಯಿಂದ `ಗುರುಗಳೇ' ಎಂದು ಕರೆಯುತ್ತಿದ್ದರು.

ADVERTISEMENT

ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 2ಗಂಟೆಗೆ ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೊ ಹಿಂಭಾಗದಲ್ಲಿರುವ ಅವರ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.