ಚೆನ್ನಪಟ್ಟಣ (ಪಿಟಿಐ): ಕರ್ನಾಟಕದ ಮಾಜಿ ಸಚಿವ ಎಂ. ವರದೇಗೌಡ (68) ಅವರು ಅಲ್ಪ ಕಾಲದ ಅಸ್ವಸ್ಥತೆಯ ಬಳಿಕ ಶನಿವಾರ ಇಲ್ಲಿ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಗೌಡ ಅವರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.
ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಮೂರು ಬಾರಿ ಗೆದ್ದು ಪ್ರತಿನಿಧಿಸಿದ್ದ ವರದೇಗೌಡ ಅವರು ದಿವಂಗತ ಜೆ.ಎಚ್. ಪಟೇಲ್ ಸಚಿವ ಸಂಪುಟದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ವರದೇಗೌಡ ನಿಧನಕ್ಕೆ ಸಂತಾಪ ವ್ಯಕ್ತ ಪಡಿಸಿದ್ದಾರೆ. ಅರಣ್ಯ ಸಚಿವ ಸಿ.ಪಿ. ಯೋಗೇಶ್ವರ್, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರೂ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.