ADVERTISEMENT

ಮಾದಿಗ ಗುತ್ತಿಗೆದಾರರ ಸಹಕಾರಿ ಸಂಘ ಅಸ್ತಿತ್ವಕ್ಕೆ: ಸಂಗಮೇಶ್‌

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2017, 19:30 IST
Last Updated 22 ಅಕ್ಟೋಬರ್ 2017, 19:30 IST

ಬೆಂಗಳೂರು: ‘ರಾಜ್ಯ ಮಾದಿಗ ಗುತ್ತಿಗೆದಾರರ ಪತ್ತಿನ ಸಹಕಾರಿ ಸಂಘವನ್ನು ನೂತನವಾಗಿ ಅಸ್ತಿತ್ವಕ್ಕೆ ತರಲಾಗುತ್ತಿದೆ’ ಎಂದು ಸಂಘದ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಎಸ್‌.ಸಂಗಮೇಶ್‌ ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಂಘವು ರಾಜಧಾನಿಯಲ್ಲಿ ಕೇಂದ್ರ ಕಚೇರಿ ಹೊಂದಲಿದೆ. ರಾಜ್ಯದಾದ್ಯಂತ ಮಾದಿಗ ಗುತ್ತಿಗೆದಾರರಿಂದ ಷೇರು ಸಂಗ್ರಹಿಸಿ, ಸದಸ್ಯರಿಗೆ ಸಾಲಸೌಲಭ್ಯ ಒದಗಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಮಾದಿಗ ಗುತ್ತಿಗೆದಾರರ ಸಮ್ಮೇಳನವನ್ನು ಡಿಸೆಂಬರ್ ತಿಂಗಳಲ್ಲಿ ನಡೆಸಲಾಗುದು. ಅರಮನೆ ಮೈದಾನ ಅಥವಾ ಅಂಬೇಡ್ಕರ್‌ ಭವನದಲ್ಲಿ ಸಮ್ಮೇಳನ ನಡೆಸುವ ಉದ್ದೇಶವಿದೆ. ಕಾಮಗಾರಿ ಗುತ್ತಿಗೆಯಲ್ಲಿ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಸೌಲಭ್ಯವನ್ನು ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತಂದಿರುವ ರಾಜ್ಯ ಸರ್ಕಾರಕ್ಕೆ ಸಮ್ಮೇಳನದಲ್ಲಿ ಕೃತಜ್ಞತೆ ಸಲ್ಲಿಸಲಾಗುವುದು ಎಂದರು.

ADVERTISEMENT

ಈ ಸಂಘಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ಶ್ರೀಕಂಠ ಬ್ರಹ್ಮಸಂದ್ರ, ಗಣೇಶ್ ಹೊರತಟ್ನಾಳ ಹಾಗೂ ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಕೆ.ಆರ್‌.ದೇವರಾಜ್ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.