ADVERTISEMENT

ಮಾರಾಟವಾಗಿದ್ದ ಮಗು ವಶ: ಮಹಿಳೆ ಬಂಧನ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2014, 19:45 IST
Last Updated 12 ಮಾರ್ಚ್ 2014, 19:45 IST

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಒಂದು ತಿಂಗಳ ಹೆಣ್ಣು ಮಗು ಖರೀದಿಸಿದ್ದ ಆರೋಪದ ಮೇರೆಗೆ ದಾವಣಗೆರೆಯ ಮಹಿಳೆಯೊಬ್ಬರನ್ನು ಮಂಗಳವಾರ ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆಗೆ ತೆರಳಿದ ಮಹಿಳಾ ಠಾಣೆ ಸಬ್ ಇನ್‌ಸ್ಪೆಕ್ಟರ್ ಮಧು ಮತ್ತು ಸಿಬ್ಬಂದಿ ಐಶಾಕ್ ಪಾಷಾ ಎಂಬುವರ ಪತ್ನಿ ಜಮೀಲಾ (35) ಅವರನ್ನು ಮಗು ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಮುಂದಿನ ಕಾನೂನು ಕ್ರಮಕ್ಕಾಗಿ ಜಮೀಲಾರವರ ಅವರನ್ನು ಮಕ್ಕಳ ಕಲ್ಯಾಣ ಸಮಿತಿಗೆ ವಹಿಸಿದ್ದಾರೆ.

ಹೆಣ್ಣು ಮಗುವನ್ನೂ ಕೂಡ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ಒಪ್ಪಿಸಲಾಗಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಐಶಾಕ್ ಪಾಷಾ ದಂಪತಿಗೆ ಗಂಡು ಮಕ್ಕಳಿದ್ದು, ಹೆಣ್ಣು ಮಕ್ಕಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೆಣ್ಣು ಮಗು ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ. ಮಗುವನ್ನು ಅಜ್ಜಿಯೇ ಭಾನುವಾರ ಮಾರಾಟ ಮಾಡಿದ್ದು, ಸೋಮವಾರ ಬೆಳಕಿಗೆ ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.