ADVERTISEMENT

ಮಾರ್ಚ್‌ 2 ರಂದು ಕನಕದಾಸ ಪ್ರತಿಮೆ ಅನಾವರಣ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2018, 19:30 IST
Last Updated 26 ಫೆಬ್ರುವರಿ 2018, 19:30 IST

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಾರ್ಚ್‌ 2 ರಂದು ಕನಕದಾಸರ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗುವುದು ಎಂದು ಸಾರಿಗೆ ಸಚಿವರ ಎಚ್‌.ಎಂ.ರೇವಣ್ಣ ಹೇಳಿದ್ದಾರೆ.

12 ಅಡಿ ಎತ್ತರದ 1,200 ಕಿಲೋ ಗ್ರಾಂ ತೂಕದ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸುವರು ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಶಿಲ್ಪಿ ಅಶೋಕ್‌ ಗುಡಿಗಾರ್‌ ಪ್ರತಿಮೆಯನ್ನು ತಯಾರಿಸಿದ್ದಾರೆ. ರಾಜ್ಯದ ಜನತೆಯ ಹೆಮ್ಮೆಯ ಪ್ರತೀಕವಾಗಿ ಪ್ರತಿಮೆ ಸ್ಥಾಪಿಸಲಾಗುತ್ತಿದೆ ಎಂದು ಅವರು ಹೇಳಿದರು.

ADVERTISEMENT

‘ಇಂದಿರಾ ಸಾರಿಗೆ’ ಕುರಿತು ಸಭೆ:

ನಗರದಲ್ಲಿ ‘ಇಂದಿರಾ ಸಾರಿಗೆ’ಯನ್ನು ಆರಂಭಿಸುವ ಸಂಬಂಧ ವಿವಿಧ ಇಲಾಖೆಗಳ ಜೊತೆ ಮೂರು ಸುತ್ತಿನ ಚರ್ಚೆ ನಡೆಸಲಾಗಿದೆ. ಬೆಂಗಳೂರು ಸುತ್ತಮುತ್ತಲಿನ ಎರಡು ಲಕ್ಷ ಮಹಿಳಾ ಕಾರ್ಮಿಕರಿಗೆ ಇದರಿಂದ ಅನುಕೂಲವಾಗಲಿದೆ ಎಂದು ರೇವಣ್ಣ ತಿಳಿಸಿದರು.

ಇಂದಿರಾ ಸಾರಿಗೆ ಯೋಜನೆಯನ್ನು ಮಾರ್ಚ್‌ 10 ರೊಳಗೆ ಜಾರಿಗೆ ಮಾಡಲಾಗುವುದು ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.